ಕುಡಚಿ: 7 ಬಾಂದಾರಗಳ ನಿರ್ಮಾಣಕ್ಕೆ ಪ್ರಸ್ತಾವ : ಸಚಿವ ಜೆ.ಸಿ.ಮಾಧುಸ್ವಾಮಿ

ಬೆಳಗಾವಿ ಜಿಲ್ಲೆಯ ಕುಡಚಿ ಮತಕ್ಷೇತ್ರದಲ್ಲಿ 13.50 ಕೋಟಿ ರೂ.ವೆಚ್ಚದಲ್ಲಿ 7 ಸರಣಿ ಬಾಂದಾರ, ಚೆಕ್‌ಡ್ಯಾಮುಗಳನ್ನು ನಿರ್ಮಿಸುವ ಪ್ರಸ್ತಾವನೆ ಇದೆ.

Online News Today Team

ಬೆಳಗಾವಿ, ಸುವರ್ಣಸೌಧ, ಡಿ.21 : ಬೆಳಗಾವಿ ಜಿಲ್ಲೆಯ ಕುಡಚಿ ಮತಕ್ಷೇತ್ರದಲ್ಲಿ 13.50 ಕೋಟಿ ರೂ.ವೆಚ್ಚದಲ್ಲಿ 7 ಸರಣಿ ಬಾಂದಾರ, ಚೆಕ್‌ಡ್ಯಾಮುಗಳನ್ನು ನಿರ್ಮಿಸುವ ಪ್ರಸ್ತಾವನೆ ಇದೆ. ಇದರಲ್ಲಿ 5 ಕೋಟಿ ರೂ.ವೆಚ್ಚದಲ್ಲಿ 2 ಸರಣಿ ಬಾಂದಾರುಗಳನ್ನು ನಿರ್ಮಿಸುವ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಹೇಳಿದರು.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ಕುಡಚಿ ಕ್ಷೇತ್ರದ ಶಾಸಕ ಪಿ.ರಾಜೀವ್ ಅವರ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

ಕುಡಚಿ ಮತಕ್ಷೇತ್ರದಲ್ಲಿ ಸಣ್ಣ ನೀರಾವರಿ ಇಲಾಖೆಯ 4 ಕೆರೆಗಳಿವೆ. 2019-20 ರಲ್ಲಿ 80 ಲಕ್ಷ ರೂ.ವೆಚ್ಚದಲ್ಲಿ ಈ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ.13.50 ಕೋಟಿ ರೂ.ವೆಚ್ಚದಲ್ಲಿ 7 ಸರಣಿ ಬಾಂದಾರಗಳನ್ನು ನಿರ್ಮಿಸುವ ಪ್ರಸ್ತಾವ ಇದೆ. ಇವುಗಳಲ್ಲಿ 5 ಕೋಟಿ ರೂ.ವೆಚ್ಚದಲ್ಲಿ 2 ಸರಣಿ ಬಾಂದಾರಗಳನ್ನು ನಿರ್ಮಿಸಲು ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಬಾಕಿ ಉಳಿದ 5 ಕಾಮಗಾರಿಗಳನ್ನು ಅನುದಾನ ಲಭ್ಯತೆ ಆಧರಿಸಿ ಕೈಗೊಳ್ಳಲಾಗುವುದು ಎಂದರು.

Follow Us on : Google News | Facebook | Twitter | YouTube