ಶಿವಮೊಗ್ಗ : ಸಚಿವ ಕೆ.ಎಸ್.ಈಶ್ವರಪ್ಪ ಅವರ ಪ್ರವಾಸ

Shimoga : Minister KS Eshwarappa's tour

ಕನ್ನಡ ನ್ಯೂಸ್ ಟುಡೇ

ಶಿವಮೊಗ್ಗ : ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಜನವರಿ 24ರಂದು ಬೆಳಿಗ್ಗೆ ಶಿವಮೊಗ್ಗಕ್ಕೆ ಆಗಮಿಸುವರು. ಅಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‍ಸಾಬ್ ಸಭಾಂಗಣದಲ್ಲಿ ನಡೆಯಲಿರುವ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸುವರು. ಸಂಜೆ 5 ಗಂಟೆಗೆ ನಗರದ ಡಾ|| ಬಿ.ಆರ್.ಅಂಬೇಡ್ಕರ್ ಭವನದ ಆವರಣದಲ್ಲಿ ತೋಟಗಾರಿಕೆ ಇಲಾಖೆಯು ಏರ್ಪಡಿಸಿರುವ ಫಲ-ಪುಷ್ಪ ಪ್ರದರ್ಶನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಅಂದು ರಾತ್ರಿ ವಾಸ್ತವ್ಯ ಮಾಡುವರು.

ಜನವರಿ 25ರಂದು ಬೆಳಿಗ್ಗೆ 10ಗಂಟೆಗೆ ಕಂಟ್ರಿಕ್ಲಬ್ ರಸ್ತೆಯಲ್ಲಿರುವ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರಸ್ವಾಮಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾವಹಿಸುವರು. ಅಂದು ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡುವರು. ಜನವರಿ 26ರಂದು ಬೆಳಿಗ್ಗೆ 9ಗಂಟೆಗೆ ಶಿವಮೊಗ್ಗದ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆಯಲಿರುವ 71ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ, ನಾಡಿನ ಜನತೆಗೆ ಸಂದೇಶ ನೀಡುವರು. ಸಂಜೆ 7ಕ್ಕೆ ಕೋಟೆ ರಸ್ತೆಯ ಭಾರತಮಾತಾ ದೇವಿಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅಂದು ರಾತ್ರಿ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುವರು.////

ಶಿವಮೊಗ್ಗ : ಸಚಿವ ಕೆ.ಎಸ್.ಈಶ್ವರಪ್ಪ ಅವರ ಪ್ರವಾಸ - Kannada News

 

Follow us On

FaceBook Google News