Basavaraj Bommai: ಪರಿಸರ ವೃದ್ಧಿಗೆ ಮುಂದಿನ ಬಜೆಟ್‌ನಲ್ಲಿ ವಿಶೇಷ ಯೋಜನೆ: ಸಿಎಂ ಬೊಮ್ಮಾಯಿ

special plan for environmental improvement in Next Budget, Basavaraj Bommai: ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಸರ ವೃದ್ಧಿಗೆ, ಬಜೆಟ್‌ನಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

🌐 Kannada News :

special plan for environmental improvement in Next Budget, BS Bommai:

ಬೆಂಗಳೂರು : ಮುಂದಿನ ದಿನಗಳಲ್ಲಿ ಕರ್ನಾಟಕ (Karnataka) ರಾಜ್ಯದಲ್ಲಿ ಪರಿಸರ ವೃದ್ಧಿಗೆ, ಬಜೆಟ್‌ನಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

ಪರಿಸರ ವೃದ್ಧಿಗಾಗಿ ಮುಂದಿನ ಬಜೆಟ್‌ನಲ್ಲಿ ವಿಶೇಷ ಯೋಜನೆಯನ್ನು ರೂಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

“ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ” ಸಲುವಾಗಿ ಮಲ್ಲೇಶ್ವರದ ಅರಣ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಹಿರಿಕರು ಅರಣ್ಯವನ್ನು ಸಂರಕ್ಷಣೆ ಮಾಡಿದ್ದಕ್ಕೆ ಇಂದು ನಾವಿದ್ದೇವೆ. ಹಿರಿಯರ ಹಾಗೆ ನಾವೂ ಸಹ ಮುಂದಿನ ಪೀಳಿಗೆಯವರಿಗೆ ಪರಿಸರ, ಅರಣ್ಯ ಸಂರಕ್ಷಣೆ ಮಾಡಬೇಕಿದೆ ಎಂದರು.

ಅಲ್ಲದೆ, ರಾಜ್ಯದಲ್ಲಿ ರಾಷ್ಟ್ರೀಯ ಸರಾಸರಿಗೆ ಶೇ.10 ರಷ್ಟು ಅರಣ್ಯ ವೃದ್ಧಿ ಆಗಬೇಕಿದೆ. ಕಾಡನ್ನು ಉಳಿಸಿ ಬೆಳೆಸಲು ಸರ್ಕಾರ ಅಗತ್ಯ ಕ್ರಮ ವಹಿಸಲಿದೆ ಎಂದರು. ಹಾಗೂ ಇದೇ ಮೊದಲ ಬಾರಿಗೆ ಪರಿಸರ ನಷ್ಟ ತಪ್ಪಿಸಲು ಯೋಜನೆ ತರಲು ಉದ್ದೇಶಿಸಲಾಗಿದೆ. ಆ ಮೂಲಕ, ಪರಿಸರ ನಷ್ಟ ತಡೆಯಲು ಯತ್ನಿಸಲಾಗುವುದು ಎಂದು ಹೇಳಿದರು.

📱 Latest Kannada News ಗಳಿಗಾಗಿ Kannada News Today App ಡೌನ್ ಲೋಡ್ ಮಾಡಿಕೊಳ್ಳಿ.
📣 All Kannada News Now in our Facebook Page.
Contact for web design services Mobile