ಪ್ರೌಢಶಾಲಾ ಮುಖ್ಯ ಶಿಕ್ಷಕರ ವರ್ಗಾವಣೆ ಮಿತಿ ಶೇ. 7ಕ್ಕೆ ಹೆಚ್ಚಿಸಲು ಅರುಣ ಶಹಾಪುರ ಮನವಿ

ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ವರ್ಗಾವಣೆ ಶೇ. 2ರ ಮಿತಿಯನ್ನು ತೆಗೆದು ಹಾಕಿ ಶೇ. 7 ರಷ್ಟು ವರ್ಗಾವಣೆಗೆ ಅವಕಾಶ ಕಲ್ಪಿಸಬೇಕೆಂದು ಸದಸ್ಯ ಅರುಣ ಶಹಾಪುರ ಅವರು ವಿಧಾನ ಪರಿಷತ್ತಿನಲ್ಲಿಂದು ಒತ್ತಾಯಿಸಿದರು.

Online News Today Team

ಬೆಳಗಾವಿ ಸುವರ್ಣಸೌಧ, ಡಿ.21 : ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ವರ್ಗಾವಣೆ ಶೇ. 2ರ ಮಿತಿಯನ್ನು ತೆಗೆದು ಹಾಕಿ ಶೇ. 7 ರಷ್ಟು ವರ್ಗಾವಣೆಗೆ ಅವಕಾಶ ಕಲ್ಪಿಸಬೇಕೆಂದು ಸದಸ್ಯ ಅರುಣ ಶಹಾಪುರ ಅವರು ವಿಧಾನ ಪರಿಷತ್ತಿನಲ್ಲಿಂದು ಒತ್ತಾಯಿಸಿದರು.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು ರಾಜ್ಯದಲ್ಲಿ ಸಾವಿರಕ್ಕಿಂತ ಹೆಚ್ಚು ಪ್ರೌಢಶಾಲೆಗಳಿವೆ. ಶೇ. 2ರಷ್ಟು ಪ್ರಮಾಣದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ಮಾತ್ರ ಅವಕಾಶ ಕಲ್ಪಿಸಿರುವುದರಿಂದ ಕೇವಲ 81 ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ವರ್ಗಾವಣೆಗೆ ಅವಕಾಶ ಸಿಗಲಿದೆ.  ವೃಂದ ಬಲ ಪರಿಗಣಿಸುವಾಗ ಸಹ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರನ್ನು ಬೇರೆ ಬೇರೆಯಾಗಿ ಪರಿಗಣಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

Follow Us on : Google News | Facebook | Twitter | YouTube