ಸರ್ಕಾರ ರಚನೆ ಮುಂಚೂಣಿಯ ಬಿಜೆಪಿ ನಾಯಕರಿಗೆ ಕಾದಿದೆ ಕಂಟಕ…?

The formation of the government, the BJP leaders are in trouble

ಸರ್ಕಾರ ರಚನೆ ಮುಂಚೂಣಿಯ ಬಿಜೆಪಿ ನಾಯಕರಿಗೆ ಕಾದಿದೆ ಕಂಟಕ…? – The formation of the government, the BJP leaders are in trouble.

ಸರ್ಕಾರ ರಚನೆ ಮುಂಚೂಣಿಯ ಬಿಜೆಪಿ ನಾಯಕರಿಗೆ ಕಾದಿದೆ ಕಂಟಕ…?

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಸಮರದ ಫಲಿತಾಂಶ ಪ್ರಕಟವಾದ ಬಳಿಕ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಲೇ ಬಂದಿದ್ದಾರೆ.

ಅಂತೆಯೇ, ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕೀಯ ಚಿತ್ರಣದಲ್ಲಿ ಹಲವಾರು ಬದಲಾವಣೆಗಳಾಗಲಿವೆ ಎನ್ನುವುದಕ್ಕೆ ಪೂರಕವಾದ ಮಾಹಿತಿಗಳು ದೊರೆಯುತ್ತಿವೆ ರಾಜ್ಯದಲ್ಲಿ ಸರ್ಕಾರ ರಚನೆಗೆ ರಾಜ್ಯ ಬಿಜೆಪಿ ನಾಯಕರು ಪ್ರಯತ್ನ ನಡೆಸುತ್ತಿರುವ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ನಾಯಕರು ತಕ್ಷಣಕ್ಕೆ ಯಾವುದೇ ಪ್ರಯತ್ನ ಕೈಗೊಳ್ಳಬಾರದು ಎಂದು ಸೂಚನೆ ನೀಡಿದ್ದಾರೆ.

ಕಮಲದ ವರಿಷ್ಠ ನಾಯಕರು ಸೂಚನೆಯಿಂದಾಗಿ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಬಳಿಕ ಸರ್ಕಾರ ರಚಿಸಬಹುದು ಎಂದುಕೊಂಡಿದ್ದ ಬಿಜೆಪಿ ನಾಯಕರಿಗೆ ನಿರಾಸೆಯಾಗಿದೆ. ಕೇಂದ್ರದಲ್ಲಿ ಎನ್.ಡಿ.ಎ. ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಬರಲಿದೆ ಎಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

ಆದರೆ, ಪಕ್ಷದ ಕೇಂದ್ರ ನಾಯಕರು ಸದ್ಯಕ್ಕೆ ಸರ್ಕಾರ ರಚನೆಯ ಪ್ರಯತ್ನ ನಡೆಸದಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಬಿಜೆಪಿ ರಾಷ್ಟ್ರೀಯ ನಾಯಕರು ಕೇಂದ್ರದಲ್ಲಿ ಎನ್.ಡಿ.ಎ. ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲಿಗೆ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಆದ್ಯತೆ ನೀಡಲಿದ್ದಾರೆ. ಬಳಿಕ ರಾಜಸ್ಥಾನ, ನಂತರ ಕರ್ನಾಟಕ ರಾಜಕೀಯದ ಬಗ್ಗೆ ಗಮನ ಹರಿಸಲಿದ್ದಾರೆ ಎನ್ನಲಾಗಿದೆ.

ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ದೊರೆತರೂ ಸಹ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಲಿಲ್ಲ ಸದ್ಯಕ್ಕೆ ಸರ್ಕಾರ ರಚನೆಗೆ ಕೈಹಾಕದಂತೆ ಪಕ್ಷದ ವರಿಷ್ಠರು ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.////