ಎರಡನೇ ಹಂತದ ನಾಮಪತ್ರ ಸಲ್ಲಿಕೆಗೆ ನಾಳೆ ಕ್ಷಣಗಣನೆ

Tomorrow's countdown for second step Nomination submission

Online News Today Team

ರಾಜ್ಯದ ಎರಡನೆ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಿನ್ನೆಯವರೆಗೆ 99 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನ.

ಏ.23ರಂದು ಮತದಾನ ನಡೆಯುವ ಎರಡನೆ ಹಂತದ ಲೋಕಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬೀದರ್, ಬಳ್ಳಾರಿ, ಕಲಬುರಗಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ರಾಯಚೂರು, ಕೊಪ್ಪಳ, ವಿಜಯಪುರ, ಹಾವೇರಿ ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ನಿನ್ನೆಯವರೆಗೆ 99 ಅಭ್ಯರ್ಥಿಗಳು 139 ನಾಮಪತ್ರ ಸಲ್ಲಿಸಿದ್ದಾರೆ. 95 ಪುರುಷ ಹಾಗೂ ನಾಲ್ವರು ಮಹಿಳಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಪರಿಶೀಲನೆ ಏ.5ರಂದು ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಏ.8ರ ವರೆಗೂ ಕಾಲಾವಕಾಶವಿದೆ./// ವರದಿ : ರವಿಚಂದ್ರ ಮುರಾಳ

Follow Us on : Google News | Facebook | Twitter | YouTube