ನಟ ದರ್ಶನ್ ಜಾಮೀನು ಅರ್ಜಿ ವಜಾ, ಇನ್ನಷ್ಟು ದಿನ ದರ್ಶನ್ಗೆ ಜೈಲೇ ಗತಿ!
ಬೆಂಗಳೂರು (Bengaluru) : ರೇಣುಕಾಸ್ವಾಮಿ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ಎ-2 ದರ್ಶನ್ (Actor Darshan) ಸಲ್ಲಿಸಿದ್ದ ಜಾಮೀನು ಅರ್ಜಿ ಇಂದು ವಜಾ ಆಗಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಆ ಮೂಲಕ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಬಿಗ್ ಶಾಕ್ ಆಗಿದೆ.
ನಟ ದರ್ಶನ್ ಜಾಮೀನು ಅರ್ಜಿ ವಜಾ ಆಗಿದ್ದು ಇನ್ನಷ್ಟು ದಿನ ದರ್ಶನ್ಗೆ ಜೈಲೇ ಗತಿ ಆಗಿದೆ, ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ದರ್ಶನ್ ಹಾಗೂ ಅಭಿಮಾನಿಗಳಿಗೆ ಇದು ಶಾಕಿಂಗ್ ಸುದ್ದಿ ಆಗಿದೆ. ದರ್ಶನ್ ಪರ ವಕೀಲರು ಬೆಂಗಳೂರಿನ ಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಇಷ್ಟು ದಿನ ನ್ಯಾಯಾಲಯ ವಾದ – ಪ್ರತಿವಾದ ಆಲಿಸಿತ್ತು, ಇಂದು ತೀರ್ಪು ಪ್ರಕಟವಾಗಿದ್ದು ಜಾಮೀನು ಅರ್ಜಿ ವಜಾ ಆಗಿದೆ.
ಪ್ರಧಾನ ಆರೋಪಿಗಳಾದ ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನಿಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಪಿ ಪ್ರಸನ್ನಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೂನ್ 11 ರಂದು ಪವಿತ್ರಾಗೆ ಅನುಚಿತ ಸಂದೇಶ ಕಳುಹಿಸಿದ್ದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಬರ್ಬರವಾಗಿ ಕೊಂದ ಆರೋಪದ ಮೇಲೆ ದರ್ಶನ್, ಪವಿತ್ರಾ ಗೌಡ ಮತ್ತು ಇತರ 15 ಮಂದಿಯನ್ನು ಬಂಧಿಸಲಾಗಿತ್ತು.
ದರ್ಶನ್ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಸುದೀರ್ಘ ವಾದ ಆಲಿಸಿದ ನ್ಯಾಯಾಧೀಶರು ಇಂದು ಅಂತಿಮ ಆದೇಶವನ್ನು ತಿಳಿಸಿದ್ದಾರೆ.
ಮತ್ತೊಂದೆಡೆ ದರ್ಶನ್ ಜಾಮೀನು ಅರ್ಜಿಯನ್ನು ಎಸ್ಪಿಪಿ ಪ್ರಸನ್ನಕುಮಾರ್ ತೀವ್ರವಾಗಿ ವಿರೋಧಿಸುತ್ತಿದ್ದರು. ದರ್ಶನ್ ಅವರನ್ನು ಬಿಡುಗಡೆ ಮಾಡಬಾರದು ಎಂದು ವಾದಿಸಿದ ಅವರು, ವಿಚಾರಣೆ ವೇಳೆ ರೇಣುಕಾಸ್ವಾಮಿಯ ಎದೆಗೆ ಒದೆಯುವುದನ್ನು ದರ್ಶನ್ ಒಪ್ಪಿಕೊಂಡಿದ್ದಾರೆ ಎಂದು ಹೈಲೈಟ್ ಮಾಡಿದ್ದರು.
Actor Darshan Bail Application Rejected
Our Whatsapp Channel is Live Now 👇