Sandalwood NewsBangalore News

ಅಕ್ಟೋಬರ್ 14ಕ್ಕೆ ನಟ ದರ್ಶನ್ ಜಾಮೀನು ಅರ್ಜಿ ಭವಿಷ್ಯ ನಿರ್ಧಾರ

Actor Darshan’s bail : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದ್ದು, ಅರ್ಜಿ ವಿಚಾರಣೆ, ವಾದ ಪ್ರತಿವಾದದ ಬಳಿಕ ಆದೇಶವನ್ನು ಕಾಯ್ದಿರಿಸಲಾಗಿದೆ. ಅಂದರೆ ಅಕ್ಟೋಬರ್ 14ಕ್ಕೆ ದರ್ಶನ್ ಜಾಮೀನು ಅರ್ಜಿ ಭವಿಷ್ಯ ನಿರ್ಧಾರವಾಗಲಿದೆ. ದರ್ಶನ್ ಅಭಿಮಾನಿಗಳಿಗೆ ಇನ್ನಷ್ಟು ಕುತೂಹಲ ಹೆಚ್ಚಾಗಿದೆ, ಅಕ್ಟೋಬರ್ 14ಕ್ಕೆ ದರ್ಶನ್ ಅವರಿಗೆ ಜಾಮೀನು ಸಿಗಲಿದೆಯೇ ಇಲ್ಲವೇ ಎಂಬುದನ್ನು ಕಾದುನೋಡಬೇಕಾಗಿದೆ.

ದರ್ಶನ್​ ಅವರಿಗೆ ಜಾಮೀನು ಕೊಡಿಸುವುದಕ್ಕೆ ಅವರ ಪರ ವಕೀಲ ಸಿವಿ ನಾಗೇಶ್ ಅವರು ವಾದ ಮಾಡಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್​ ಆದಷ್ಟು ಬೇಗ ಹೊರಗೆ ಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಬೆಂಗಳೂರು: ಇಂದು ಕರ್ನಾಟಕ ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

ಇನ್ನು ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರ ಎಲ್ಲಾ ಪ್ರಶ್ನೆಗಳಿಗೆ ಪ್ರಸನ್ನಕುಮಾರ್ ಅವರು ಉತ್ತರ ನೀಡಿದ್ದಾರೆ ಎನ್ನಲಾಗಿದೆ. ರೇಣುಕಾ ಸ್ವಾಮಿ  ಪ್ರಕರಣ ಆರೋಪಿ ದರ್ಶನ್ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಾ, ಪೊಲೀಸರು ದರ್ಶನ್ ವಿರುದ್ಧ ಸಾಕ್ಷ್ಯಗಳನ್ನು ಸೃಷ್ಟಿಮಾಡಿದ್ದಾರೆ ಎಂದೂ ಆರೋಪಿಸಿದರು.

ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಕಳೆದೊಂದು ವಾರದಿಂದ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಕೊನೆಗೂ ದರ್ಶನ್ ಪರ ವಕೀಲರು ಹಾಗೂ ಎಸ್​ಪಿಪಿ ಇಬ್ಬರೂ ವಾದವನ್ನು ನ್ಯಾಯಾಲಯ ಆಲಿಸಿದ್ದು ಅಕ್ಟೋಬರ್ 14ಕ್ಕೆ ದರ್ಶನ್ ಜಾಮೀನು ಅರ್ಜಿ ಭವಿಷ್ಯ ನಿರ್ಧಾರವಾಗಲಿದೆ.

ಅರ್ಜಿ ವಿಚಾರಣೆ, ವಾದ ಪ್ರತಿವಾದದ ಬಳಿಕ ಆದೇಶವನ್ನು ಕಾಯ್ದಿರಿಸಲಾಗಿದೆ.

ದಸರಾ ಹಬ್ಬಕ್ಕೂ ಮುನ್ನವೇ ನಟ ದರ್ಶನ್ ಅವರಿಗೆ ಜಾಮೀನು ಸಿಗಬಹುದು ಎಂದು ಕಾತುರದಿಂದ ಇದ್ದ ಅಭಿಮಾನಿಗಳಿಗೆ ಮತ್ತೆ ಬೇಸರವಾಗಿದೆ, ಈ ಬಾರಿ ದಸರಾ ಸಮಯದಲ್ಲೂ ದರ್ಶನ್ ಅವರು ಜೈಲಿನಲ್ಲೇ ಕಳೆಯಬೇಕಾಗಿದೆ.

Actor Darshan’s bail application to be decided on October 14

Our Whatsapp Channel is Live Now 👇

Whatsapp Channel

Related Stories