Sandalwood News
ನಟ, ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್ ಇನ್ನಿಲ್ಲ
ಕನ್ನಡ ಚಿತ್ರ ರಂಗದ ದಿಗ್ಗಜ, ರೆಬೆಲ್ ಸ್ಟಾರ್, ಮಾಜಿ ಸಚಿವ ಅಂಬರೀಶ್ (66) ವಿಧಿವಶರಾಗಿದ್ದಾರೆ.
Publisher: Kannada News Today (Digital Media)
ಕನ್ನಡ ಚಿತ್ರ ರಂಗದ ದಿಗ್ಗಜ, ರೆಬೆಲ್ ಸ್ಟಾರ್, ಮಾಜಿ ಸಚಿವ ಅಂಬರೀಶ್ (66) ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆ ಹಾಗೂ ಎದೆ ನೋವು ಕಾಣಿಸಿಕೊಂಡ ಅವರನ್ನು ಶನಿವಾರ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಶನಿವಾರ ಸಂಜೆ 4.30ರವರೆಗೂ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಭಾ.ಮ.ಹರೀಶ್ ಅವರ ಜತೆ ತಮ್ಮ ನಿವಾಸದಲ್ಲಿ ಹರಟೆ ಹೊಡೆಯುತ್ತಾ ಕುಳಿತಿದ್ದ ಅಂಬರೀಶ್ ಅವರ ಆರೋಗ್ಯ ಸಂಜೆ 5 ಗಂಟೆ ವೇಳೆಗೆ ಏರುಪೇರಾಯಿತು.
ಕುಟುಂಬದ ಸದಸ್ಯರು ಮತ್ತು ಆತ್ಮೀಯರು ಅವರನ್ನು ತಕ್ಷಣವೇ ವಿಕ್ರಂ ಆಸ್ಪತ್ರೆಗೆ ಕರೆದೊಯ್ದರು. ಡಾ. ಸತೀಶ್ ಮತ್ತು ತಂಡ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಆರಂಭಿಸಿದರಾದರೂ ರಾತ್ರಿ 10.50ರ ಸುಮಾರಿಗೆ ನಿಧನರಾದರು.