Actor Sarath Babu: ಸದ್ಯ ನಟ ಶರತ್ ಬಾಬು ಐಸಿಯುನಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವು ಗಂಟೆಗಳು ಕಳೆಯುವ ತನಕ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ನಟ ಶರತ್ ಬಾಬು ಅವರು ಕನ್ನಡ, ತೆಲುಗು, ತಮಿಳು ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಭಾಷೆ ಯಾವುದೇ ಆದರೂ ತಮ್ಮ ನಿರರ್ಗಳ ಮಾತಿನಿಂದ ಜನರನ್ನು ಸೆಳೆಯುತ್ತಿದ್ದರು, ಇತ್ತೀಚಿಗೆ ಅವರ ಆರೋಗ್ಯ (Actor Sarath Babu Health Update) ಹದಗೆಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜನಪ್ರಿಯ ನಟ ಶರತ್ ಬಾಬು ಅವರು ತೀವ್ರ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ (Hyderabad AIG Hospital) ಕರೆದೊಯ್ಯಲಾಯಿತು. ಎರಡು ದಿನಗಳಿಂದ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಇಂದು ಶರತ್ ಬಾಬು ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಶ್ವಾಸಕೋಶ, ಯಕೃತ್, ಕಿಡ್ನಿ ಮೊದಲಾದ ಪ್ರಮುಖ ಅಂಗಗಳು ಹಾನಿಗೊಳಗಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಲಿವುಡ್ ಹಿರಿಯ ನಟ ಶರತ್ ಬಾಬು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಅವರು ತೀವ್ರ ಅಸ್ವಸ್ಥರಾಗಿದ್ದರಿಂದ ಅವರ ಕುಟುಂಬ ಸದಸ್ಯರು ಶುಕ್ರವಾರ (ಏಪ್ರಿಲ್ 21) ಉತ್ತಮ ಚಿಕಿತ್ಸೆಗಾಗಿ ಹೈದರಾಬಾದ್‌ಗೆ ಸ್ಥಳಾಂತರಿಸಿದ್ದಾರೆ. ಅವರನ್ನು ಹೈದರಾಬಾದ್ ಗಚಿಬೌಲಿ ಎಐಜಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗಾಗಿ ಐಸಿಯುನಲ್ಲಿ ದಾಖಲಿಸಲಾಗಿದೆ.
ಸದ್ಯ ಶರತ್ ಬಾಬು ಐಸಿಯುನಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವು ಗಂಟೆಗಳು ಕಳೆಯುವ ತನಕ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಶರತ್ ಬಾಬು ಅವರ ಆರೋಗ್ಯ ಬುಲೆಟಿನ್ ಇಂದು ಸಂಜೆ ಬಿಡುಗಡೆಯಾಗುವ ಸಾಧ್ಯತೆ ಇದೆ.
ಶರತ್ ಬಾಬು ಅನೇಕ ಸಿನಿಮಾಗಳಲ್ಲಿ ನಾಯಕನಾಗಿ ಮತ್ತು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ನಟಿಸಿದ್ದಾರೆ. ಅವರು ತಮ್ಮ ಚಲನಚಿತ್ರಗಳಿಂದ ಅನೇಕ ಯಶಸ್ಸನ್ನು ಗಳಿಸಿದವರು. ಈಗಲೂ ಸಹ ಶರತ್ ಬಾಬು ಆಗಾಗ ಕೆಲವು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಅವರು ಶೀಘ್ರ ಗುಣಮುಖರಾಗಲಿ ಎಂದು ಅನೇಕ ಸಿನಿಮಾ ತಾರೆಯರು ಹಾರೈಸಿದ್ದಾರೆ.
ತೆಲುಗು ಅಲ್ಲದೆ ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿಯೂ ಅವರು ನಟಿಸಿದ್ದಾರೆ. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಶರತ್ ಬಾಬು ನಾಯಕ, ಖಳನಾಯಕ, ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಪ್ರೇಕ್ಷಕರನ್ನು ರಂಜಿಸಿದ್ದರು. ತೆಲುಗಿನ ವಕೀಲ್ ಸಾಬ್ ಚಿತ್ರದಲ್ಲಿ ಪವನ್ ಕಲ್ಯಾಣ್ ಜೊತೆಗೆ ಕೊನೆಯದಾಗಿ ನಟಿಸಿದ್ದರು. ಇದಲ್ಲದೆ, ಶರತ್ ಬಾಬು ಅನೇಕ ದೂರದರ್ಶನ ಕಾರ್ಯಕ್ರಮಗಳಲ್ಲಿ ಸಹ ನಟಿಸಿದ್ದಾರೆ.
Actor Sarath Babu Effected With Serious Health Issue Treatment In ICU
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.