Welcome To Kannada News Today

ಕೊರೊನಾಗೆ ತಿಥಿಮಾಡಿ ಅತಿಥಿ ಆಗ್ಬೇಡಿ ಎಂದ ಕ್ರೇಜಿಸ್ಟಾರ್

Crazy Star Ravichandran spoke differently about Corona awareness

🌐 Kannada News :

ಕೊರೊನಾ ವಿರುದ್ಧ ದೇಶದ ಹೋರಾಟಕ್ಕೆ ಎಲ್ಲರೂ ಸಾಥ್ ನೀಡಿ, ಸರ್ಕಾರದ ಆದೇಶಕ್ಕೆ ಸಹಕರಿಸಿ, ಮನೆಯಲ್ಲಿಯೇ ಇದ್ದು ಸೋಂಕು ಹರಡುವಿಕೆಗೆ ಕಡಿವಾಣ ಹಾಕಿ ಎಂದು ಸ್ಯಾಂಡಲ್‍ವುಡ್, ಟಾಲಿವುಡ್, ಬಾಲಿವುಡ್ ಸೇರಿದಂತೆ ಅನೇಕ ಸಿನಿಮಾ ಕಲಾವಿದರು, ನಟ, ನಟಿಯರು ಜನರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಆದರೆ ಕೆಲ ಜನರು ಮಾತ್ರ ಯಾರ ಮಾತನ್ನು ಕಿವಿಗೆ ಹಾಕಿಕೊಳ್ಳದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊರೊನಾ ಭೀಕರತೆ ಅರಿಯದೆ ಮುರ್ಖತನ ಪ್ರದರ್ಶಿಸುತ್ತಿದ್ದಾರೆ. ಇದನ್ನು ಕಂಡು ಕ್ರೇಜಿ ಸ್ಟಾರ್ ರವಿಚಂದ್ರನ್ ತಮ್ಮದೇ ಶೈಲಿಯಲ್ಲಿ ಜನರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಕೊರೊನಾಗೆ ತಿಥಿ ಮಾಡಬೇಕು ಅಂದರೆ ನೀವು ಅದಕ್ಕೆ ಅತಿಥಿಯಾಗಬಾರದು. ಮನುಷ್ಯನಿಗೆ ಕಷ್ಟ ಬಂದಾಗಲೇ ಆ ಪರಿಸ್ಥಿತಿಯನ್ನು ಆತ ಹೇಗೆ ನಿಭಾಯಿಸುತ್ತಾನೆ ಎನ್ನೋದರ ಮೇಲೆ ಆತನ ವ್ಯಕ್ತಿತ್ವ ಗೊತ್ತಾಗುತ್ತೆ ಎಂದಿದ್ದಾರೆ.

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.