ಜಾಕ್ವೆಲಿನ್ ಫರ್ನಾಂಡೀಸ್ ವಿರುದ್ಧ ಚಾರ್ಜ್ ಶೀಟ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಾಯಕಿ ಜಾಕ್ವೆಲಿನ್ ಫರ್ನಾಂಡೀಸ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಜಾರಿ ನಿರ್ದೇಶನಾಲಯ ಸಿದ್ಧತೆ ನಡೆಸಿದೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಾಯಕಿ ಜಾಕ್ವೆಲಿನ್ ಫರ್ನಾಂಡೀಸ್ (jacqueline fernandez) ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಜಾರಿ ನಿರ್ದೇಶನಾಲಯ ಸಿದ್ಧತೆ ನಡೆಸಿದೆ. ಕಳೆದ ಕೆಲವು ತಿಂಗಳುಗಳಲ್ಲಿ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಕೆಯ ಪಾತ್ರವಿದೆ ಎಂದು ಇಡಿ ತೀರ್ಮಾನಿಸಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಜಾಕ್ವೆಲಿನ್‌ಗೆ ಸೇರಿದ ₹ 15 ಲಕ್ಷ ನಗದು ಮತ್ತು ₹ 7 ಕೋಟಿ ಮೌಲ್ಯದ ವಸ್ತುಗಳನ್ನು ಇಡಿ ಜಪ್ತಿ ಮಾಡಿತ್ತು. ತಿಹಾರ್ ಜೈಲಿನಿಂದ ನಡೆದ ಈ ಹವಾಲಾದಲ್ಲಿ ಸುಕೇಶ್ ಚಂದ್ರಶೇಖರ್ ಪ್ರಮುಖ ಪಾತ್ರ ವಹಿಸಿದ್ದ. ಕಳೆದ ಬಾರಿ ಜೂನ್‌ನಲ್ಲಿ ವಿಚಾರಣೆ ನಡೆಸಿದ ಬಳಿಕ ಅಧಿಕಾರಿಗಳು ವಿವರ ಪಡೆದಿದ್ದರು.

ರಶ್ಮಿಕಾ ಮಂದಣ್ಣ ಇನ್ಮುಂದೆ ಕನ್ನಡ ಸಿನಿಮಾ ಮಾಡೋಲ್ವಂತೆ

ಜಾಕ್ವೆಲಿನ್ ಫರ್ನಾಂಡೀಸ್ ವಿರುದ್ಧ ಚಾರ್ಜ್ ಶೀಟ್

ಈ ಪ್ರಕರಣದಲ್ಲಿ ಜಾಕ್ವೆಲಿನ್ ವಿರುದ್ಧ ಚಾರ್ಜ್ ಶೀಟ್ ದಾಖಲಿಸಲು ಇಡಿ ನಿರ್ಧರಿಸಿದೆ ಎಂದು ವರದಿಯಾಗಿದೆ. ಈ ಶ್ರೀಲಂಕಾದ ನಟಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿ ಅನೇಕ ಹಿಟ್ ಚಿತ್ರಗಳಲ್ಲಿ ನಟಿಸುವ ಮೂಲಕ ಪ್ರಸಿದ್ಧರಾಗಿದ್ದಾರೆ.

ED charge sheet against bollywood heroine jacqueline fernandez

Related Stories