Jana Nayagan Cinema: ವಿಜಯ್ ಅಭಿನಯದ ಸಿನಿಮಾ ಜನ ನಾಯಕನ್ ಜುಲೈ 24ರಂದು ಬಿಡುಗಡೆ ಸಾಧ್ಯತೆ

Jana Nayagan Cinema: ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಕನ್’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಎ ಪ್ರಮಾಣಪತ್ರ ನೀಡಿದೆ. ಜುಲೈ 24ರಂದು ವಿಶ್ವದಾದ್ಯಂತ ಬಿಡುಗಡೆಯಾಗುವ ಸಾಧ್ಯತೆ ಇದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ.

Jana Nayagan Cinema: ತಮಿಳು ನಟ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಕನ್’ ಚಿತ್ರದ ಬಗ್ಗೆ ಹೊಸ ಮಾಹಿತಿ ಹೊರಬಿದ್ದಿದೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಈ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ನೀಡಿದ್ದು, ಚಿತ್ರ ಬಿಡುಗಡೆಯ ಹಾದಿ ಸುಗಮವಾಗಿದೆ.

ಸಿಬಿಎಫ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಮಾಹಿತಿಯಂತೆ, ಚಿತ್ರದ ಅವಧಿ 183 ನಿಮಿಷಗಳು (3 ಗಂಟೆ 3 ನಿಮಿಷ) ಆಗಿದೆ. ಆದರೆ ಸೆನ್ಸಾರ್ ಪ್ರಕ್ರಿಯೆಯಲ್ಲಿ ಯಾವುದೇ ದೃಶ್ಯಗಳನ್ನು ಕತ್ತರಿಸಲಾಗಿದೆಯೇ ಎಂಬ ವಿವರವನ್ನು ಮಂಡಳಿ ಬಹಿರಂಗಪಡಿಸಿಲ್ಲ.

ಇತ್ತೀಚಿನ ಮಾಹಿತಿಯ ಪ್ರಕಾರ, ‘ಜನ ನಾಯಕನ್’ ಸಿನಿಮಾ ಜುಲೈ 24, 2026ರಂದು ವಿಶ್ವದಾದ್ಯಂತ ಬಿಡುಗಡೆಯಾಗುವ ಸಾಧ್ಯತೆ ಇದೆ. ವಿದೇಶಿ ವಿತರಕರಿಗೂ ಇದೇ ದಿನಾಂಕವನ್ನು ತಿಳಿಸಲಾಗಿದೆ ಎನ್ನಲಾಗಿದ್ದು, ನಿರ್ಮಾಣ ಸಂಸ್ಥೆಯಿಂದ ಶೀಘ್ರದಲ್ಲೇ ಅಧಿಕೃತ ಘೋಷಣೆ ನಿರೀಕ್ಷಿಸಲಾಗಿದೆ.

ಈ ಸಿನಿಮಾ ವಿಜಯ್ ಅವರ ಸಿನಿ ಜೀವನದ ಅತ್ಯಂತ ಮಹತ್ವದ ಚಿತ್ರಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತಿದೆ. ರಾಜಕೀಯ ಪ್ರವೇಶದ ಬಳಿಕ ನಟನಾಗಿ ಅವರ ಕೊನೆಯ ಸಿನಿಮಾ ಎನ್ನುವ ಕಾರಣದಿಂದ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ವಿಶೇಷ ಕುತೂಹಲ ಮೂಡಿದೆ. ರಾಜಕೀಯ ಮತ್ತು ಆ್ಯಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರ ಭರ್ಜರಿ ವಿದಾಯ ನೀಡಲಿದೆ ಎಂಬ ನಿರೀಕ್ಷೆ ಸಿನಿಪ್ರಿಯರಲ್ಲಿದೆ.

ಚಿತ್ರಕ್ಕೆ ಎಚ್. ವಿನೋತ್ ನಿರ್ದೇಶನ ಮಾಡಿದ್ದು, ಪೂಜಾ ಹೆಗ್ಡೆ ನಾಯಕಿಯಾಗಿ ಅಭಿನಯಿಸಿದ್ದಾರೆ. ಮಮಿತಾ ಬೈಜು, ಬಾಬಿ ಡಿಯೋಲ್, ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್, ಪ್ರಿಯಾಮಣಿ, ನರೇನ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

KVN ಪ್ರೊಡಕ್ಷನ್ಸ್ ಭಾರಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿದ್ದಾರೆ. ವಿಜಯ್-ಅನಿರುದ್ಧ್ ಜೋಡಿಯ ಹಿಂದಿನ ಸಿನಿಮಾಗಳ ಸಂಗೀತ ದೊಡ್ಡ ಯಶಸ್ಸು ಕಂಡಿರುವ ಕಾರಣ, ಈ ಚಿತ್ರದ ಹಾಡುಗಳು ಹಾಗೂ ಹಿನ್ನೆಲೆ ಸಂಗೀತದ ಮೇಲೂ ಅಭಿಮಾನಿಗಳು ಭಾರೀ ನಿರೀಕ್ಷೆ ಇಟ್ಟಿದ್ದಾರೆ.

TRENDING ARTICLES1 / 3
Show More

Ramya

Sub Editor, Cinema, Health & Lifestyle : 👤 Ramya is a journalist with five years of experience in… More »

Related Stories