ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ನಿಧನ

Story Highlights

ಕನ್ನಡ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.

ಬೆಂಗಳೂರು (Bengaluru): ಕನ್ನಡ ನಟ ಕಿಚ್ಚ ಸುದೀಪ್ (Actor Sudeep Mother) ಅವರ ತಾಯಿ ಸರೋಜಾ ಅವರು ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಅನಾರೋಗ್ಯದ ಕಾರಣ ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿತ್ತು.

ನಟ ಸುದೀಪ್ ಅವರ ತಾಯಿ ನಿಧನ

ಇಂದು ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ ಅವರ ಜೆಪಿ ನಗರ ನಿವಾಸಕ್ಕೆ (Bengaluru JP Nagar House) ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

Kannada Actor Sudeep Mother Saroja Passed Away

Related Stories