ಕೆಜಿಎಫ್ 2 : ಚಿತ್ರದ ಶೂಟಿಂಗ್ ಪುನರಾರಂಭ, ರಾಕಿಂಗ್ ಸ್ಟಾರ್ ಯಶ್ ಮತ್ತೆ ಸೆಟ್ ನಲ್ಲಿ
K.G.F Chapter 2 : ರಾಕಿಂಗ್ ಸ್ಟಾರ್ ಯಶ್ ಗುರುವಾರದಿಂದ ಕೆಜಿಎಫ್ 2 ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ಚಿತ್ರದಲ್ಲಿ ಸಂಜಯ್ ದತ್ ಅವರು ಅಧಿರಾ ಎಂಬ ಖಳನಾಯಕನ ಪಾತ್ರದಲ್ಲಿದ್ದರೆ, ರವೀನಾ ಟಂಡನ್ ಪ್ರಮುಖ ಪಾತ್ರದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ‘ಕೆಜಿಎಫ್ 2’ ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
( Kannada News ) #KGFChapter2 ಕನ್ನಡ ಚಿತ್ರ, ಸ್ಯಾಂಡಲ್ ವುಡ್ ಬಹುನಿರೀಕ್ಷಿತ ಸಿನಿಮಾ ‘ಕೆಜಿಎಫ್ 2’ ಚಿತ್ರೀಕರಣ ಪುನರಾರಂಭಗೊಡಿದೆ, KGF 2 ರಾಕಿಂಗ್ ಸ್ಟಾರ್ ಯಶ್, ಪ್ರಶಾಂತ್ ನೀಲ್ ಸಂಯೋಜನೆಯಲ್ಲಿ ‘ಕೆಜಿಎಫ್ 1’ ನ ಮುಂದುವರಿದ ಭಾಗವಾಗಿದೆ.
ಕೋವಿಡ್ ಪ್ರಭಾವದಿಂದ ಸ್ಥಗಿತಗೊಂಡಿದ್ದ ಚಿತ್ರದ ಶೂಟಿಂಗ್ ಇತ್ತೀಚೆಗೆ ಪುನರಾರಂಭಗೊಂಡಿದೆ ಎಂದು ತಿಳಿದುಬಂದಿದೆ. ಈಗ ಹೀರೋ ಯಶ್ ಗುರುವಾರದಿಂದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನು ಸ್ವತಃ ನಿರ್ಮಾಪಕ ಕಾರ್ತಿಕ್ ಗೌಡ ಹೇಳಿದ್ದಾರೆ. ಚಿತ್ರದ ಶೂಟಿಂಗ್ ಈ ತಿಂಗಳ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದ್ದು, ಶೀಘ್ರದಲ್ಲೇ ಬಿಡುಗಡೆಯ ದಿನಾಂಕದ ಕುರಿತು ಪ್ರಕಟಣೆ ನೀಡಲಾಗುವುದು ಎಂದು ಕಾರ್ತಿಕ್ ಹೇಳಿದ್ದಾರೆ.
@TheNameIsYash joins the final leg of #KGFChapter2 shoot from tomorrow. We will wrap up the film by the end of this month and proceed towards the release. @hombalefilms @VKiragandur @prashanth_neel @SrinidhiShetty7 @bhuvangowda84
— Karthik Gowda (@Karthik1423) October 7, 2020
ಶೂಟಿಂಗ್ ಹೈದರಾಬಾದ್, ಬೆಂಗಳೂರು ಮತ್ತು ಮಂಗಳೂರಿನಲ್ಲಿ ನಡೆಯಲಿದೆ. ಸಿನಿ ಮೂಲಗಳ ಪ್ರಕಾರ, ಮುಂದಿನ ವರ್ಷ ಸಂಕ್ರಾಂತಿಗೆ ಈ ಚಿತ್ರವನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಚಿತ್ರದಲ್ಲಿ ಸಂಜಯ್ ದತ್ ಅವರು ಅಧಿರಾ ಎಂಬ ಖಳನಾಯಕನ ಪಾತ್ರದಲ್ಲಿದ್ದರೆ, ರವೀನಾ ಟಂಡನ್ ಪ್ರಮುಖ ಪಾತ್ರದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ‘ಕೆಜಿಎಫ್ 2’ ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.