ಬಾಲಿವುಡ್ ಸ್ಟಾರ್ ಡೈರೆಕ್ಟರ್ ಜೊತೆ ಪ್ರಭಾಸ್ ಸಿನಿಮಾ

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್, ನಾಗ್ ಅಶ್ವಿನ್ ನಿರ್ದೇಶನದ ಪ್ರಾಜೆಕ್ಟ್ ಕೆ, ಓಂ ರಾವುತ್ ನಿರ್ದೇಶನದ ಆದಿಪುರುಷ್ ಶೂಟಿಂಗ್ ನಲ್ಲಿ ಬ್ಯೂಸಿಯಾಗಿದ್ದಾರೆ. ಇದೇ ವೇಳೆ ಪ್ರಭಾಸ್ ಹೊಸ ಸಿನಿಮಾದ ಬಗ್ಗೆ ಇಂಟ್ರೆಸ್ಟಿಂಗ್ ಸುದ್ದಿಯೊಂದು ಬಂದಿದೆ. ಬಾಲಿವುಡ್ ಸ್ಟಾರ್ ಡೈರೆಕ್ಟರ್ ಸಿದ್ಧಾರ್ಥ್ ಆನಂದ್ ನಿರ್ದೇಶನದಲ್ಲಿ ಸಿನಿಮಾ ಮಾಡಲಿದ್ದಾರೆ ಎಂಬ ಟಾಕ್ ಬಂದಿದೆ.

ಇದನ್ನೂ ಓದಿ : ಸೋನು ಶ್ರೀನಿವಾಸ್ ಗೌಡ ಲೈಫ್ ಸ್ಟೋರಿ ಸಿನಿಮಾ ಬರಲಿದೆ

ಆ್ಯಕ್ಷನ್ ಥ್ರಿಲ್ಲರ್ ಜಾನರ್ ನಲ್ಲಿ ಈ ಸಿನಿಮಾ ಇರಲಿದೆ ಎಂದು ಬಿಟೌನ್ ವಲಯದ ಮಾತು. ಅಭಿಮಾನಿಗಳು ತುಂಬಾ ಉತ್ಸುಕರಾಗಿರುವ ಈ ಸುದ್ದಿಯ ಬಗ್ಗೆ ಇನ್ನೂ ಅಧಿಕೃತ ಪ್ರಕಟಣೆ ಬರಬೇಕಿದೆ. ಇದೇ ನಿಜವಾದರೆ ಬೆಳ್ಳಿತೆರೆಯಲ್ಲಿ ಹೊಸ ಕಾಂಬಿನೇಷನ್ ಪ್ರೇಕ್ಷಕರಿಗೆ ಥ್ರಿಲ್ ನೀಡುವುದು ಖಚಿತ ಎನ್ನುತ್ತಾರೆ ಚಿತ್ರರಸಿಕರು. ಸಿದ್ದಾರ್ಥ್ ಆನಂದ್ ಸದ್ಯ ಶಾರುಖ್ ಖಾನ್ ಜೊತೆ ಪಠಾಣ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಶೂಟಿಂಗ್ ಹಂತದಲ್ಲಿದೆ.

ಬಾಲಿವುಡ್ ಸ್ಟಾರ್ ಡೈರೆಕ್ಟರ್ ಜೊತೆ ಪ್ರಭಾಸ್ ಸಿನಿಮಾ - Kannada News

ಇದನ್ನೂ ಓದಿ : ಪವಿತ್ರಾ ಲೋಕೇಶ್ ಗೆ ಸ್ಟಾರ್ ಹೀರೋಯಿಂದ ಭಾರೀ ಅವಮಾನ

ಇನ್ನೊಂದೆಡೆ ಫೈಟರ್ ಮತ್ತು ವಾರ್ 2 ಚಿತ್ರಗಳೂ ಸಿದ್ಧಾರ್ಥ್ ಆನಂದ್ ಖಾತೆಯಲ್ಲಿವೆ. ಪ್ರಭಾಸ್ ಅಭಿನಯದ ಆದಿಪುರುಷ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಇದು ಮುಂದಿನ ವರ್ಷ ಜನವರಿ 12 ರಂದು ಬಿಡುಗಡೆಯಾಗಲಿದೆ.

Prabhas Movie with BTown Star Director

Follow us On

FaceBook Google News

Advertisement

ಬಾಲಿವುಡ್ ಸ್ಟಾರ್ ಡೈರೆಕ್ಟರ್ ಜೊತೆ ಪ್ರಭಾಸ್ ಸಿನಿಮಾ - Kannada News

Read More News Today