ಭೂತಾಯಿ ಮಡಿಲು ಸೇರಿದ “ಪುನೀತ್ ರಾಜ್ ಕುಮಾರ್”, ಮಣ್ಣಲ್ಲಿ ಮಣ್ಣಾದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್

Puneeth Rajkumar Funeral : ಮಣ್ಣಲ್ಲಿ ಮಣ್ಣಾದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ - ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಅಂತ್ಯಕ್ರಿಯೆ ನೆರವೇರಿತು, ವಿಧಿವಿಧಾನಗಳು ನಡೆದ ನಂತರ ಅಪ್ಪುವನ್ನು ಮಣ್ಣಲ್ಲಿ ಮಣ್ಣು ಮಾಡಲಾಯಿತು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು.

Puneeth Rajkumar Funeral : ಮಣ್ಣಲ್ಲಿ ಮಣ್ಣಾದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್– ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಅಂತ್ಯಕ್ರಿಯೆ ನೆರವೇರಿತು, ಚಿತ್ರರಂಗದ ಹಿರಿಯರು, ಗಣ್ಯರು ಹಾಗೂ ಕುಟುಂಬಸ್ಥರು ಭಾಗಿಯಾಗಿ, ಅಂತಿಮ ನಮನ ಸಲ್ಲಿಸಿದರು.

ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು (Today) ಬೆಳಗ್ಗೆ 7.40ರ ಸುಮಾರಿಗೆ ಕಂಠೀರವ ಸ್ಟುಡಿಯೋದಲ್ಲಿ ಈಡಿಗ ಸಂಪ್ರದಾಯದಂತೆ ನಡೆಯಿತು.

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು. ಮೂರು ಬಾರಿ ಕುಶಾಲು ತೋಪು ಸಿಡಿಸಿ ಅಪ್ಪುಗೆ ಗೌರವ ಸಲ್ಲಿಸಲಾಯಿತು. ವಿನಯ್ ರಾಜ್ ಕುಮಾರ್ (Vinay Rajkumar) ಅವರು ಮೂರು ಸುತ್ತು ಸಮಾಧಿ ಸುತ್ತಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ನಂತರ ರಥದಲ್ಲಿ (ಹೂವಿನ ಪಲ್ಲಕಿ) ಪುನೀತ್ ಶವವನ್ನು ಮಲಗಿಸಿ ಪೂಜೆ ಸಲ್ಲಿಸಲಾಯಿತು. ಇದಾದ ಬಳಿಕ ಮೃತದೇಹವನ್ನು ಗುಂಡಿಗೆ ಇಳಿಸಿ ಅಲ್ಲಿ ಕೆಲವೊಂದು ವಿಧಿವಿಧಾನಗಳು ನಡೆದ ನಂತರ ಅಪ್ಪುವನ್ನು ಮಣ್ಣಲ್ಲಿ ಮಣ್ಣು ಮಾಡಲಾಯಿತು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು.

ಭೂತಾಯಿ ಮಡಿಲು ಸೇರಿದ

ಎಲ್ಲಾ ವಿಧಿವಿಧಾನಗಳ ಬಳಿಕ ಸಮಾಧಿ ಮೇಲೆ ತುಳಸಿ ಗಿಡ ನೆಡಲಾಯಿತು, ಹಾಗೂ ಮಾಲಾರ್ಪಣೆ ಮಾಡಲಾಯಿತು. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆದ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ.

ನಟ ಪುನೀತ್ ಅಕ್ಟೋಬರ್ 29ರಂದು ಹೃದಯಾಘಾತದಿಂದ ಅಕಾಲಿಕವಾಗಿ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ನಾಡು ಕಂಬನಿ ಮಿಡಿದಿತ್ತು. ನಿನ್ನೆ (ಅಕ್ಟೋಬರ್ 30) ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಪುನೀತ್​ ದರ್ಶನ ಪಡೆದು ನಮನ ಸಲ್ಲಿಸಿದರು.

 

Follow us On

FaceBook Google News