ವಾಷಿಂಗ್ಟನ್: ಅಮೆರಿಕದಲ್ಲಿ ಗುಂಡಿನ ದಾಳಿಗಳು ಈಗ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ದೇಶದಲ್ಲಿ ಗನ್ ಸಂಸ್ಕೃತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರೊಂದಿಗೆ ನಿತ್ಯ ಗುಂಡಿನ ದಾಳಿಗಳು ನಡೆಯುತ್ತಲೇ ಇರುತ್ತವೆ. ಹೊಸದಾಗಿ ಮತ್ತೊಮ್ಮೆ ಬಂದೂಕು ಮೊಳಗಿದೆ. ಪಶ್ಚಿಮ ಮೇರಿಲ್ಯಾಂಡ್‌ನ ಸ್ಮಿತ್‌ಬರ್ಗ್‌ನಲ್ಲಿ ದಾಳಿಕೋರ ಗುಂಡಿನ ದಾಳಿ ನಡೆಸಿದ್ದಾನೆ.
ಗುರುವಾರ ಮಧ್ಯಾಹ್ನ 2.30ರ ಸುಮಾರಿಗೆ ದುಷ್ಕರ್ಮಿಯೊಬ್ಬ ಸ್ಮಿತ್‌ಬರ್ಗ್‌ನಲ್ಲಿರುವ ಕೊಲಂಬಿಯಾ ಯಂತ್ರ ಕಾರ್ಖಾನೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ, ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಶೂಟರ್ ಜತೆಗೆ ಓರ್ವ ಪೊಲೀಸ್ ಗಾಯಗೊಂಡಿದ್ದಾರೆ. ಚಿಕಿತ್ಸೆ ನೀಡಿದ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಏತನ್ಮಧ್ಯೆ, ಅಮೆರಿಕದಲ್ಲಿ ಗನ್ ಸಂಸ್ಕೃತಿ ಇನ್ನೂ ಹೆಚ್ಚುತ್ತಿದೆ. ಒಂದು ತಿಂಗಳ ಅವಧಿಯಲ್ಲಿ ನ್ಯೂಯಾರ್ಕ್, ಟೆಕ್ಸಾಸ್ ಮತ್ತು ಒಕ್ಲಹೋಮಾದಲ್ಲಿ ನಡೆದ ಘಟನೆಗಳಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ. ಟೆಕ್ಸಾಸ್ ಘಟನೆಯೊಂದರಲ್ಲೇ 22 ಮಂದಿ ಬಲಿಯಾಗಿದ್ದಾರೆ.
3 Killed After Shooter Opens Fire At Maryland Factory In Us
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.