ಪಾಕಿಸ್ತಾನ; ಭಾರೀ ಮಳೆಯಿಂದಾಗಿ ಪ್ರವಾಹ – 59 ಸಾವು
ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ 59 ಜನರು ಸಾವನ್ನಪ್ಪಿದ್ದಾರೆ.
ಇಸ್ಲಾಮಾಬಾದ್: ಕಳೆದ ಕೆಲವು ದಿನಗಳಿಂದ ಪಾಕಿಸ್ತಾನದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ದೇಶದ ಬಲೂಚಿಸ್ತಾನ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ.
ಭಾರೀ ಮಳೆಯಿಂದಾಗಿ 8 ಅಣೆಕಟ್ಟುಗಳು ಒಡೆದು ಪ್ರವಾಹ ಉಂಟಾಗಿದೆ. ಇದರಿಂದಾಗಿ ಅನೇಕ ನಗರಗಳು ಪ್ರವಾಹದ ನೀರಿನಿಂದ ಆವೃತವಾಗಿವೆ. ಪ್ರವಾಹದಿಂದಾಗಿ ಹಲವು ರಸ್ತೆಗಳು ಸಂಪರ್ಕ ಕಡಿತಗೊಂಡಿದ್ದು, ನೂರಾರು ಮನೆಗಳು ಕೊಚ್ಚಿ ಹೋಗಿವೆ.
ಈ ವೇಳೆ, ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹಕ್ಕೆ 59 ಜನರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಪತ್ತು ರಕ್ಷಣಾ ತಂಡಗಳು ಪ್ರವಾಹ ಸಂತ್ರಸ್ತರ ರಕ್ಷಣೆಯಲ್ಲಿ ತೊಡಗಿವೆ.
ನಿರಂತರ ಸುರಿಯುತ್ತಿರುವ ಮಳೆಯಿಂದ ಜನರಿಗೆ ಎಚ್ಚರವಹಿಸಲು ಅಧಿಕಾರಿಗಳು ತಿಳಿಸಿದ್ದಾರೆ, ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣಾ ಕಾರ್ಯ ನಡೆಯುತ್ತಿದೆ, ಇನ್ನೂ ನಾಲ್ಕೈದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದುವರೆಗೆ ಭಾರೀ ಮಳೆಯ ಪರಿಣಾಮ ಉಂಟಾದ ಪ್ರವಾಹದಿಂದ 59 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
59 dead in Pakistan floods due to heavy rain
Follow us On
Google News |