ಬಾಂಗ್ಲಾದೇಶದಲ್ಲಿ ಮತ್ತೊಂದು ಇಸ್ಕಾನ್ ಕೇಂದ್ರಕ್ಕೆ ಬೆಂಕಿ, ವಿಗ್ರಹಗಳು ಧ್ವಂಸ

ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಹಿಂದೂ ದೇವಾಲಯಗಳ ಮೇಲಿನ ದಾಳಿಗಳು ಮುಂದುವರಿದಿವೆ. ಇತ್ತೀಚೆಗೆ ಮತ್ತೊಂದು ಇಸ್ಕಾನ್ ಕೇಂದ್ರಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಧ್ವಂಸ ಗೊಳಿಸಿದ್ದಾರೆ

- - - - - - - - - - - - - Story - - - - - - - - - - - - -

ಢಾಕಾ: ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಹಿಂದೂ ದೇವಾಲಯಗಳ ಮೇಲೆ ದಾಳಿ ಮುಂದುವರಿದಿದೆ. ಇತ್ತೀಚೆಗೆ ಮತ್ತೊಂದು ಇಸ್ಕಾನ್ ಕೇಂದ್ರಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ, ಅದರಲ್ಲಿದ್ದ ದೇವರ ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ.

ಬಾಂಗ್ಲಾದೇಶದ ರಾಜಧಾನಿ ಢಾಕಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಇಸ್ಕಾನ್ ಕೋಲ್ಕತ್ತಾದ ಉಪಾಧ್ಯಕ್ಷ ರಾಧಾರಾಮನ್ ದಾಸ್ ಹೇಳಿದ್ದಾರೆ. ಶನಿವಾರ ನಸುಕಿನ 2-3 ಗಂಟೆ ಸುಮಾರಿಗೆ ನಮ್ಹಟ್ಟದ ಇಸ್ಕಾನ್ ಕೇಂದ್ರದ ವ್ಯಾಪ್ತಿಯಲ್ಲಿರುವ ರಾಧಾಕೃಷ್ಣ ದೇವಸ್ಥಾನ ಮತ್ತು ಮಹಾಭಾಗ್ಯ ಲಕ್ಷ್ಮೀ ನಾರಾಯಣ ದೇವಸ್ಥಾನಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗಿದೆ.

ದೇವಸ್ಥಾನದ ಛಾವಣಿಗಳನ್ನು ತೆಗೆದು ಒಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಇದರಿಂದ ವಿಗ್ರಹಗಳು ಹಾಗೂ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಎಕ್ಸ್-ಪೋಸ್ಟ್ ಖಾತೆಯಲ್ಲಿ ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಮತ್ತೊಂದು ಇಸ್ಕಾನ್ ಕೇಂದ್ರಕ್ಕೆ ಬೆಂಕಿ, ವಿಗ್ರಹಗಳು ಧ್ವಂಸ

ಇದೇ ವೇಳೆ ಬಾಂಗ್ಲಾದೇಶದ ಇಸ್ಕಾನ್ ಕೇಂದ್ರಗಳ ಮೇಲೆ ದಾಳಿ ಮುಂದುವರಿದಿದೆ ಎಂದು ರಾಧಾರಾಮನ್ ದಾಸ್ ಕಳವಳ ವ್ಯಕ್ತಪಡಿಸಿದರು. ಈ ದಾಳಿಗಳ ವಿಚಾರವನ್ನು ಆ ದೇಶದ ಹಂಗಾಮಿ ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಟೀಕಿಸಿದರು. ಅವರ ಸಂಕಷ್ಟವನ್ನು ನಿವಾರಿಸಲು ಮತ್ತು ಸಮಸ್ಯೆ ಪರಿಹರಿಸಲು ಸರ್ಕಾರ ಮತ್ತು ಪೊಲೀಸರು ಏನೂ ಮಾಡುತ್ತಿಲ್ಲ ಎಂದು ಆರೋಪಿಸಿದರು.

Another Iskcon Centre In Bangladesh Set On Fire Idol Damaged

Related Stories