ಬಾಂಗ್ಲಾದೇಶ ಪ್ರವಾಹ; ಸಾವಿನ ಸಂಖ್ಯೆ 102ಕ್ಕೆ ಏರಿಕೆ

ಬಾಂಗ್ಲಾದೇಶವು 122 ವರ್ಷಗಳಲ್ಲೇ ಅತ್ಯಂತ ಭೀಕರ ಪ್ರವಾಹವನ್ನು ಎದುರಿಸುತ್ತಿದೆ.

ಢಾಕಾ: ಬಾಂಗ್ಲಾದೇಶದ ಈಶಾನ್ಯ ಭಾಗಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಈ ಕಾರಣದಿಂದಾಗಿ ವಿವಿಧ ಜಿಲ್ಲೆಗಳು ಪ್ರವಾಹದಲ್ಲಿ ತತ್ತರಿಸುತ್ತಿವೆ.

ಬಾಂಗ್ಲಾದೇಶದಲ್ಲಿ ಪ್ರತಿ ವರ್ಷ ಮಾನ್ಸೂನ್ ಸಮಯದಲ್ಲಿ ಮಳೆ ಮತ್ತು ಪ್ರವಾಹ ಸಾಮಾನ್ಯವಾಗಿದೆ, ಆದರೆ ಈಗ ಹಿಂದೆಗಿಂತ ಹೆಚ್ಚು ಮಳೆಯಾಗುತ್ತಿದೆ. ಇದರಿಂದಾಗಿ ಕಳೆದ 122 ವರ್ಷಗಳಲ್ಲೇ ಅತ್ಯಂತ ಭೀಕರ ಪ್ರವಾಹವನ್ನು ದೇಶ ಎದುರಿಸಿದೆ.

ಮಳೆ ಮತ್ತು ಪ್ರವಾಹದಿಂದಾಗಿ ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಾಂಗ್ಲಾದೇಶ ಪ್ರವಾಹ; ಸಾವಿನ ಸಂಖ್ಯೆ 102ಕ್ಕೆ ಏರಿಕೆ - Kannada News

ಈ ವೇಳೆ ಕಳೆದ ಮೇ 17ರಿಂದ ಜುಲೈ 3ರವರೆಗೆ ಮಳೆಯಿಂದಾದ ಹಾನಿಯಿಂದ ಮೃತಪಟ್ಟವರ ಸಂಖ್ಯೆ 102ಕ್ಕೆ ಏರಿಕೆಯಾಗಿದೆ. ಭಾರೀ ಮಳೆಯಿಂದ ಸುಮಾರು 40 ಲಕ್ಷ ಜನರು ತೀವ್ರ ತೊಂದರೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ಮಳೆ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಪೂರ್ಣ ಪ್ರಮಾಣದಲ್ಲಿ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Bangladesh floods The death toll rises to 102

Follow us On

FaceBook Google News