ಹಿಂದೂ ದೇವಾಲಯಗಳ ಮೇಲೆ ದಾಳಿ ಪ್ರಕರಣ, ಕಠಿಣ ಕ್ರಮ: ಬಾಂಗ್ಲಾ ಪಿಎಂ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ದೇವಾಲಯಗಳ ದಾಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಪ್ರತಿಜ್ಞೆ ಮಾಡಿದ್ದಾರೆ.

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ದೇವಾಲಯಗಳ ದಾಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಪ್ರತಿಜ್ಞೆ ಮಾಡಿದ್ದಾರೆ.

ಯಾವುದೇ ವರ್ಗಕ್ಕೆ ಸೇರಿದ ಯಾರನ್ನೂ ಬಿಡುವುದಿಲ್ಲ ಎಂದು ಅವರು ಹೇಳಿದರು. “ನಾವು ಕುಮಿಲ್ಲಾದಲ್ಲಿ ನಡೆದ ಘಟನೆಯನ್ನು ಕೂಲಂಕಷವಾಗಿ ತನಿಖೆ ಮಾಡುತ್ತೇವೆ. ಅವರು ಯಾವುದೇ ಧರ್ಮಕ್ಕೆ ಸೇರಿದವರಾಗಿದ್ದರೂ ಕಠಿಣ ಕ್ರಮಗಳು ತಪ್ಪಲ್ಲ. ನಾವು ಅವರನ್ನು ಹಿಡಿದು ಕಠಿಣವಾಗಿ ಶಿಕ್ಷಿಸುತ್ತೇವೆ ಎಂದಿದ್ದಾರೆ.

ಈ ಘಟನೆಯ ಕುರಿತು ಈಗಾಗಲೇ ಸಾಕಷ್ಟು ಮಾಹಿತಿಗಳನ್ನು ಸ್ವೀಕರಿಸಲಾಗಿದೆ. ಇದು ತಂತ್ರಜ್ಞಾನದ ಯುಗ. “ಈ ಘಟನೆಗೆ ಕಾರಣರಾದ ಪ್ರತಿಯೊಬ್ಬರನ್ನು ತಂತ್ರಜ್ಞಾನದ ಸಹಾಯದಿಂದ ಆದಷ್ಟು ಬೇಗ ಹಿಡಿಯಲಾಗುವುದು” ಎಂದು ಹಸೀನಾ ಹೇಳಿದರು.

ಇದನ್ನೂ ಓದಿ : ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ

ದೇಗುಲಗಳ ಮೇಲೆ ನಡೆದ ದಾಳಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳಿಂದ ಉದ್ವಿಗ್ನತೆ ಹೆಚ್ಚಾಗಿದೆ. ಎಚ್ಚೆತ್ತ ಸರ್ಕಾರ 22 ಜಿಲ್ಲೆಗಳಲ್ಲಿ ವಿಶೇಷ ಪಡೆಗಳನ್ನು ನಿಯೋಜಿಸಿದೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಭಾರತ ಸರ್ಕಾರ, ತಪ್ಪಿತಸ್ಥರನ್ನು ತಕ್ಷಣವೇ ಶಿಕ್ಷಿಸುವಂತೆ ಬಾಂಗ್ಲಾ ಸರ್ಕಾರಕ್ಕೆ ಮನವಿ ಮಾಡಿತು. ಈ ಹಿನ್ನೆಲೆಯಲ್ಲಿ ಹಸೀನಾ ಪ್ರತಿಕ್ರಿಯಿಸಿದ್ದಾರೆ.