ಚೀನಾದಲ್ಲಿ ಮತ್ತೆ ಲಾಕ್‌ಡೌನ್

ಚೀನಾದಲ್ಲಿ ಮತ್ತೆ ಲಾಕ್‌ಡೌನ್.. 40 ಲಕ್ಷ ಜನಸಂಖ್ಯೆಯ ನಗರ ಬಂದ್

ಬೀಜಿಂಗ್: ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ಮಹಾಮಾರಿ ಚೀನಾದಲ್ಲಿ ಮತ್ತೆ ಉಲ್ಬಣಿಸಿದೆ. ಕಳೆದ ಕೆಲವು ದಿನಗಳಿಂದ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಎಚ್ಚೆತ್ತ ಡ್ರ್ಯಾಗನ್ ಮತ್ತೊಮ್ಮೆ ನಿರ್ಬಂಧಗಳ ಹಾದಿ ಹಿಡಿದಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಚೀನಾ ಈಗಾಗಲೇ ಹಲವು ಪ್ರದೇಶಗಳಲ್ಲಿ ಶಾಲೆಗಳು ಮತ್ತು ಪ್ರವಾಸಿ ತಾಣಗಳನ್ನು ಮುಚ್ಚಿದೆ. ತೀರಾ ಅಗತ್ಯದ ಹೊರತು ಜನರು ಮನೆಯಿಂದ ಹೊರಬರಬಾರದು ಎಂದು ಸೂಚನೆ ನೀಡಲಾಗಿದೆ.

ಕಳೆದ ಕೆಲವು ದಿನಗಳಿಂದ ಚೀನಾದಲ್ಲಿ ಡೆಲ್ಟಾ ರೂಪಾಂತರದ ಅಟ್ಟಹಾಸ ನಡೆಯುತ್ತಿದೆ. ವಯಸ್ಸಾದ ದಂಪತಿಗಳು ಶಾಂಘೈನಿಂದ ಹಲವಾರು ಪ್ರಾಂತ್ಯಗಳಿಗೆ ಪ್ರಯಾಣಿಸಿದರು. ಅವರಲ್ಲಿ ಕೋವಿಡ್ ರೋಗಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಅಧಿಕಾರಿಗಳು ಅವರ ಸಂಪರ್ಕ ಪತ್ತೆಹಚ್ಚುವಿಕೆಯನ್ನು ನಡೆಸಿದರು.

ಬಳಿಕ ಕೂಲಂಕುಷವಾಗಿ ತಪಾಸಣೆ ನಡೆಸಿದಾಗ ಹತ್ತಾರು ಪ್ರಕರಣಗಳು ಬೆಳಕಿಗೆ ಬಂದಿವೆ. ಈಗಾಗಲೇ 100ಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ. ಚೀನಾ ನಿರ್ಬಂಧಗಳಿಗೆ ಒತ್ತಾಯಿಸುತ್ತಿದೆ.

ಮುಂಬರುವ ದಿನಗಳಲ್ಲಿ ವೈರಸ್‌ಗಾಗಿ ಹೆಚ್ಚಿನ ಪರೀಕ್ಷೆಗಳನ್ನು ನಡೆಸುತ್ತಿದ್ದು, ಇದು ಹೆಚ್ಚಿನ ಪ್ರಕರಣಗಳಿಗೆ ಕಾರಣವಾಗಬಹುದು ಎಂದು ಆರೋಗ್ಯ ಕಾರ್ಯಕರ್ತರು ಹೇಳುತ್ತಾರೆ.