ಬಾಂಗ್ಲಾದೇಶ: ಗೋದಾಮಿನಲ್ಲಿ ಬೆಂಕಿ.. 5 ಸಾವು, 100 ಜನರಿಗೆ ಗಾಯ
ಬಾಂಗ್ಲಾದೇಶದ ಖಾಸಗಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ.
ಢಾಕಾ : ಆಗ್ನೇಯ ಬಾಂಗ್ಲಾದೇಶದ ಕಂಟೈನರ್ ಡಿಪೋದಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಇನ್ನೂ 100 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದ ಪ್ರಮುಖ ಬಂದರು ಚಿತ್ತಗಾಂಗ್‌ನ ಹೊರಗೆ 40 ಕಿಲೋಮೀಟರ್ (25 ಮೈಲಿ) ದೂರದಲ್ಲಿರುವ ದೇಶೀಯ ಕಂಟೇನರ್ ಸಂಗ್ರಹಣಾ ಘಟಕದಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿ ಜಲಾಲ್ ಅಹ್ಮದ್ ತಿಳಿಸಿದ್ದಾರೆ.
ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯೂ ಲಘುವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಕನಿಷ್ಠ 100 ಮಂದಿ ಗಂಭೀರವಾಗಿ ಗಾಯಗೊಂಡು ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಗಾಯಗೊಂಡವರಲ್ಲಿ 20 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಶೇ.60ರಿಂದ 90ರಷ್ಟು ಸುಟ್ಟ ಗಾಯಗಳಾಗಿವೆ.
30 ಎಕರೆ ವಿಸ್ತೀರ್ಣದ ಖಾಸಗಿ ಗೋದಾಮಿನ ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಖಾಸಗಿ ಗೋದಾಮಿನಲ್ಲಿದ್ದ ಕೆಲವು ಕಂಟೈನರ್ ಗಳಲ್ಲಿ ಹೈಡ್ರೋಜನ್ ಪೆರಾಕ್ಸೈಡ್ ಸೇರಿದಂತೆ ರಾಸಾಯನಿಕಗಳಿದ್ದವು ಎನ್ನಲಾಗಿದೆ. ಅಪಘಾತದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Five people killed in fire Accident at private warehouse in Bangladesh
Follow us On
Google News |