Shinzo Abe ಜಪಾನ್‌ನ ಮಾಜಿ ಪ್ರಧಾನಿ ಅಬೆ ಮೇಲೆ ಗುಂಡಿನ ದಾಳಿ
Shinzo Abe : ಶಿಂಜೋ ಅಬೆ ಮೇಲೆ ಗುಂಡು ಹಾರಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಟೋಕಿಯೋ : ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ (Former Japan Prime Minister Shinzo Abe) ಮೇಲೆ ಗುಂಡಿನ ದಾಳಿ ನಡೆದಿದೆ. ಅವರು 2012 ರಿಂದ 2020 ರವರೆಗೆ ಜಪಾನ್ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಾರಾ ನಗರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಶಿಂಜೋ ಅಬೆ ಭಾಗವಹಿಸಿದ್ದರು. ಅಬೆ ರಸ್ತೆ ಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದಾಗ ಏಕಾಏಕಿ ಗುಂಡು ಹಾರಿಸಲಾಗಿದೆ. ಒಂದು ಗುಂಡು ಅಬೆಯ ಬೆನ್ನಿಗೆ ತಗುಲಿತು. ಪರಿಣಾಮ ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದರು.
ಆ ಬಳಿಕ ಅಲ್ಲಿ ಕರ್ತವ್ಯ ನಿರತ ಭದ್ರತಾ ಪಡೆಗಳು ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಶಿಂಜೋ ಅಬೆ ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಕರೆದೊಯ್ದರು.
ಶಿಂಜೋ ಅಬೆ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದು, ಯಾವುದೇ ಸುಧಾರಣೆಯಿಲ್ಲದೆ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ
ಪಶ್ಚಿಮ ಜಪಾನ್‌ನ ನಾರಾ ನಗರದಲ್ಲಿ ನಡೆದ ಸಭೆಯಲ್ಲಿ ಶಿಂಜೋ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ವೇದಿಕೆಯಲ್ಲಿ ಮಾತನಾಡುತ್ತಿದ್ದಾಗ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶಿಂಜೊ ವೇದಿಕೆಯ ಮೇಲೆ ಕುಸಿದು ಬಿದ್ದ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಇದೇ ವೇಳೆ ಗುಂಡಿನ ಸದ್ದು ಕೇಳಿಬಂದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಜಪಾನ್ ಮಾಧ್ಯಮಗಳು ವರದಿ ಮಾಡಿವೆ. ಪೊಲೀಸರು ಶೂಟರ್‌ನನ್ನು ಬಂಧಿಸಿದ್ದಾರೆ.
ಶಿಂಜೊ ಅಬೆ ಅವರು ಜಪಾನ್ ಇತಿಹಾಸದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ದಾಖಲೆಯನ್ನು ಹೊಂದಿದ್ದಾರೆ. 2006 ರಲ್ಲಿ, ಅವರು ಮೊದಲ ಬಾರಿಗೆ ಜಪಾನ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು. ಆದರೆ ಅವರು ಅನಾರೋಗ್ಯದ ಕಾರಣ 2007 ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. 2012ರಲ್ಲಿ ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು. 2020 ರವರೆಗೆ ಅಧಿಕಾರದಲ್ಲಿ ಮುಂದುವರಿದರು. ಅದೇ ವರ್ಷದ ಆಗಸ್ಟ್‌ನಲ್ಲಿ ಅವರು ಅನಾರೋಗ್ಯದ ಕಾರಣ ಒಂದು ವರ್ಷ ಮುಂಚಿತವಾಗಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದರು.
ಇದೇ ವೇಳೆ ಶಿಂಜೋ ಅಬೆ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. 2006-07ರಲ್ಲಿ ಭಾರತಕ್ಕೆ ಮೊದಲ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಸಂಸತ್ತನ್ನು ಉದ್ದೇಶಿಸಿ ಮಾತನಾಡಿದರು. ಜನವರಿ 2014, ಡಿಸೆಂಬರ್ 2015 ಮತ್ತು ಸೆಪ್ಟೆಂಬರ್ 2017 ರಲ್ಲಿ ದೇಶವನ್ನು ಸುತ್ತಿದರು. ಜಪಾನ್ ಪ್ರಧಾನಿಯೊಬ್ಬರು ಭಾರತಕ್ಕೆ ಇಷ್ಟು ಬಾರಿ ಭೇಟಿ ನೀಡಿರುವುದು ಇದೇ ಮೊದಲು.
Former Japan Prime Minister Shinzo Abe has been shot in Nara
WATCH: Bystanders rush to help former Japanese Prime Minister Shinzo Abe after he is shotpic.twitter.com/vgk7fn323p
— BNO News (@BNONews) July 8, 2022
Follow us On
Google News |