ಪಾಕಿಸ್ತಾನದಲ್ಲಿ ಭಾರೀ ಮಳೆ; 165 ಮಂದಿ ಸಾವು, 171 ಮಂದಿಗೆ ಗಾಯ
ಪಾಕಿಸ್ತಾನದಲ್ಲಿ ಮಳೆ ಅವಾಂತರ ಸೃಷ್ಟಿಸುತ್ತಿದೆ. ಜೂನ್ 14 ರಿಂದ ಇಲ್ಲಿಯವರೆಗೆ ಮಳೆಯಿಂದಾಗಿ ವಿವಿಧ ಅಪಘಾತಗಳಲ್ಲಿ ಸುಮಾರು 165 ಜನರು ಸಾವನ್ನಪ್ಪಿದ್ದಾರೆ.
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮಳೆ ಅವಾಂತರ ಸೃಷ್ಟಿಸುತ್ತಿದೆ. ಜೂನ್ 14 ರಿಂದ ಇಲ್ಲಿಯವರೆಗೆ ಮಳೆಯಿಂದಾಗಿ ವಿವಿಧ ಅಪಘಾತಗಳಲ್ಲಿ ಸುಮಾರು 165 ಜನರು ಸಾವನ್ನಪ್ಪಿದ್ದಾರೆ. ಇನ್ನೂ 171 ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಮಳೆಯಿಂದಾಗಿ ರಾಜ್ಯದಲ್ಲಿ 65 ಮಂದಿ ಸಾವನ್ನಪ್ಪಿದ್ದು, 49 ಮಂದಿ ಗಾಯಗೊಂಡಿದ್ದಾರೆ. ಹಲವು ಪ್ರದೇಶಗಳಲ್ಲಿ ಅಣೆಕಟ್ಟುಗಳು ಒಡೆದಿರುವ ಬಗ್ಗೆ ವರದಿಯಾಗಿದೆ. ನೂರಾರು ಮನೆಗಳು ಕೊಚ್ಚಿ ಹೋಗಿವೆ.
ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ನದಿಗಳು, ಅಣೆಕಟ್ಟುಗಳು ಮತ್ತು ಜಲಾಶಯಗಳ ಬಳಿ ಪ್ರವಾಸಿಗರನ್ನು ನಿಷೇಧಿಸಲಾಗಿದೆ. ಸಿಂಧೂ ಪ್ರಾಂತ್ಯದಲ್ಲಿ ಭಾರೀ ಮಳೆಯಿಂದಾಗಿ 38 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಇದರಿಂದ ವಿವಿಧೆಡೆ 39 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಜುಲೈ 5ರಿಂದ ಸುರಿದ ಮಳೆಯಿಂದಾಗಿ ಜೀವಹಾನಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Heavy rains in Pakistan, 165 people died.. 171 people were injured
Follow us On
Google News |