ಬಾಂಗ್ಲಾದೇಶದಲ್ಲಿ ಭಾರೀ ಮಳೆಗೆ ಕನಿಷ್ಠ 41 ಮಂದಿ ಸಾವು

ಬಾಂಗ್ಲಾದೇಶದ ಈಶಾನ್ಯ ಭಾಗದಲ್ಲಿ ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ತೀವ್ರ ಅಸ್ತವ್ಯಸ್ತಗೊಂಡಿದೆ.

ಢಾಕಾ: ಬಾಂಗ್ಲಾದೇಶದ ಈಶಾನ್ಯ ಭಾಗದಲ್ಲಿ ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ತೀವ್ರ ಅಸ್ತವ್ಯಸ್ತಗೊಂಡಿದೆ. ವಿವಿಧ ಜಿಲ್ಲೆಗಳು ಜಲಾವೃತವಾಗಿವೆ.

ಬಾಂಗ್ಲಾದೇಶದಲ್ಲಿ ಪ್ರತಿ ವರ್ಷ ಮುಂಗಾರು ಹಂಗಾಮಿನಲ್ಲಿ ಮಳೆ ಮತ್ತು ಪ್ರವಾಹ ಹಾನಿ ಸಂಭವಿಸುವುದು ಸಾಮಾನ್ಯವಾದರೂ ಈಗ ಹಿಂದೆಂದೂ ಕಾಣದ ಮಟ್ಟದಲ್ಲಿ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ದೇಶವು 122 ವರ್ಷಗಳಲ್ಲೇ ಅತ್ಯಂತ ಭೀಕರ ಪ್ರವಾಹವನ್ನು ಎದುರಿಸುತ್ತಿದೆ.

ವಿಶೇಷವಾಗಿ ಸಿಲ್ಹೆಟ್ ಮತ್ತು ಸುನಮ್‌ಗಂಜ್ ಜಿಲ್ಲೆಗಳು ಮಳೆ ಮತ್ತು ಪ್ರವಾಹದಿಂದ ತೀವ್ರವಾಗಿ ಬಾಧಿತವಾಗಿವೆ. ಎರಡೂ ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಮನೆ ಕಳೆದುಕೊಂಡ ಜನರು ಶಾಲೆಗಳಲ್ಲಿ ಬೀಡು ಬಿಟ್ಟಿದ್ದಾರೆ. ಮಳೆ ಮತ್ತು ಪ್ರವಾಹದಿಂದಾಗಿ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಬಾಂಗ್ಲಾದೇಶದಲ್ಲಿ ಭಾರೀ ಮಳೆಗೆ ಕನಿಷ್ಠ 41 ಮಂದಿ ಸಾವು - Kannada News

ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಏತನ್ಮಧ್ಯೆ, ಭಾರಿ ಮಳೆಗೆ ಬಾಂಗ್ಲಾದೇಶ ಮತ್ತು ಭಾರತದಲ್ಲಿ ಇದುವರೆಗೆ ಮಕ್ಕಳು ಸೇರಿದಂತೆ 41 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆಯಿಂದ ಸುಮಾರು 40 ಲಕ್ಷ ಮಂದಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಮಳೆ ಪೀಡಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Heavy rains kill at least 41 in Bangladesh

Follow us On

FaceBook Google News

Read More News Today