World News Kannada
ಅಂತ್ಯಕ್ರಿಯೆ ವೇಳೆ ಹಠಾತ್ ಗುಂಡಿನ ದಾಳಿ, ಹಲವರಿಗೆ ಗಾಯ
ವಾಷಿಂಗ್ಟನ್: ಅಮೆರಿಕದಲ್ಲಿ ಗುಂಡಿನ ದಾಳಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ವೇಳೆ ನಿನ್ನೆ ವಿಸ್ಕಾನ್ಸಿನ್ ನಲ್ಲಿ ನಡೆದ ಅಂತ್ಯಕ್ರಿಯೆ ವೇಳೆ ನಿಗೂಢ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ.
ಗುಂಡಿನ ದಾಳಿಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಗ್ರೇಸ್‌ಲ್ಯಾಂಡ್ ಸ್ಮಶಾನದಲ್ಲಿ ಮಧ್ಯಾಹ್ನ 2:26 ಕ್ಕೆ ಈ ಗುಂಡಿನ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಆದರೆ, ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.
ಕಳೆದ ತಿಂಗಳು ಯುನೈಟೆಡ್ ಸ್ಟೇಟ್ಸ್‌ನ ಪ್ರಾಥಮಿಕ ಶಾಲೆ ಮತ್ತು ಸೂಪರ್‌ಮಾರ್ಕೆಟ್‌ನಲ್ಲಿ ನಡೆದ ಮಾರಣಾಂತಿಕ ಗುಂಡಿನ ದಾಳಿಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ 31 ಜನರು ಸಾವನ್ನಪ್ಪಿದ್ದರು. ಬಂದೂಕು ಸಂಸ್ಕೃತಿ ತೊಲಗಬೇಕು ಎಂಬುದು ಅಲ್ಲಿನ ಜನರ ಆಗ್ರಹವಾಗಿದೆ.
Many injured in a shooting during funeral at USA