ಕುವೈತ್ ಅತ್ಯುನ್ನತ ಗೌರವವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಗೌರವಿಸಿದೆ

ಕುವೈತ್ ತನ್ನ ದೇಶದ ಅತ್ಯುನ್ನತ ಗೌರವವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿ ಗೌರವಿಸಿದೆ. 43 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಕುವೈತ್‌ಗೆ ಭೇಟಿ ನೀಡಿದಾಗ ಅವರಿಗೆ ಈ ಗೌರವ ಸಿಕ್ಕಿದೆ.

- - - - - - - - - - - - - Story - - - - - - - - - - - - -
  • ಪ್ರಧಾನಿ ಮೋದಿಯವರಿಗೆ ಕುವೈತ್ ಅತ್ಯುನ್ನತ ಗೌರವ.
  • 43 ವರ್ಷಗಳ ನಂತರ ಭಾರತದ ಪ್ರಧಾನಿ ಕುವೈತ್‌ಗೆ ಭೇಟಿ.
  • ನಾಗರಿಕ ಪ್ರಶಸ್ತಿ ‘ದಿ ಆರ್ಡರ್ ಆಫ್ ಮುಬಾರಕ್ ದಿ ಗ್ರೇಟ್’ ಪ್ರದಾನ.

ಕುವೈತ್ (Kuwait) ತನ್ನ ದೇಶದ ಅತ್ಯುನ್ನತ ಗೌರವವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ (PM Narendra Modi) ನೀಡಿ ಗೌರವಿಸಿದೆ. ಕುವೈತ್‌ನ ಎಮಿರ್ ಶೇಖ್ ಮಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುವೈತ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ದಿ ಆರ್ಡರ್ ಆಫ್ ಮುಬಾರಕ್ ದಿ ಗ್ರೇಟ್’ ಅನ್ನು ಪ್ರದಾನ ಮಾಡಿದರು.

ಕುವೈತ್-ಭಾರತ ಸಂಬಂಧಗಳನ್ನು ಬಲಪಡಿಸುವಲ್ಲಿ ಅವರ ಪ್ರಯತ್ನಗಳಿಗಾಗಿ ಅವರಿಗೆ ಈ ಗೌರವವನ್ನು ನೀಡಲಾಯಿತು. 43 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಕುವೈತ್‌ಗೆ ಭೇಟಿ ನೀಡಿದಾಗ ಅವರಿಗೆ ಈ ಗೌರವ ಸಿಕ್ಕಿದೆ.

ಏತನ್ಮಧ್ಯೆ, ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಶನಿವಾರ ಕುವೈತ್ ತಲುಪಿದ್ದಾರೆ. ಇದು 43 ವರ್ಷಗಳ ನಂತರ ಭಾರತದ ಪ್ರಧಾನಿಯ ಮೊದಲ ಭೇಟಿಯಾಗಿದೆ. “ಮೇಕ್ ಇನ್ ಇಂಡಿಯಾ” ಉತ್ಪನ್ನಗಳು ಕುವೈತ್‌ನಲ್ಲಿ ವಿಶೇಷವಾಗಿ ಆಟೋಮೊಬೈಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಮೆಷಿನರಿ ಮತ್ತು ಟೆಲಿಕಮ್ಯುನಿಕೇಶನ್ ಕ್ಷೇತ್ರಗಳಲ್ಲಿ ಹೊಸ ಪ್ರವೇಶವನ್ನು ಮಾಡುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದು ಮೋದಿ ಹೇಳಿದರು. ಭಾರತ ಇಂದು ಅತ್ಯಂತ ಕಡಿಮೆ ವೆಚ್ಚದಲ್ಲಿ ವಿಶ್ವದರ್ಜೆಯ ಉತ್ಪನ್ನಗಳನ್ನು ತಯಾರಿಸುತ್ತಿದೆ ಎಂದರು.

ಕುವೈತ್ ಅತ್ಯುನ್ನತ ಗೌರವವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಗೌರವಿಸಿದೆ

Kuwait Honors PM Narendra Modi with Highest Civilian Award

Related Stories