ಅಮೆರಿಕದಲ್ಲಿ ಮತ್ತೊಂದು ಗುಂಡಿನ ದಾಳಿ, ಇಬ್ಬರ ಸಾವು
Texas shooting: ಅಮೆರಿಕದಲ್ಲಿ ಮತ್ತೊಮ್ಮೆ ಗುಂಡಿನ ದಾಳಿ ನಡೆದಿದೆ, ಟೆಕ್ಸಾಸ್ನ ಹಾಲ್ಟಮ್ ಸಿಟಿಯಲ್ಲಿ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ
Texas shooting: ಅಮೆರಿಕದಲ್ಲಿ ಮತ್ತೊಮ್ಮೆ ಗುಂಡಿನ ದಾಳಿ ನಡೆದಿದೆ, ಟೆಕ್ಸಾಸ್ನ ಹಾಲ್ಟಮ್ ಸಿಟಿಯಲ್ಲಿ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ನಾಲ್ವರು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರು ಸರ್ಕಾರಿ ಅಧಿಕಾರಿಗಳೂ ಇದ್ದಾರೆ ಎಂದು ವಿವರಿಸಲಾಗಿದೆ.
ಮನೆಯಲ್ಲಿ ಓರ್ವ ವೃದ್ಧೆ ಶವವಾಗಿ ಪತ್ತೆಯಾಗಿದ್ದು, ಮತ್ತೊಬ್ಬರು ಮನೆಯ ಸಮೀಪವೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಾಯಗೊಂಡ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿಸಿದ್ದಾರೆ.
ಗುಂಡಿನ ದಾಳಿ ನಡೆಸಿದ ವ್ಯಕ್ತಿ ಮತ್ತೊಂದು ಪ್ರದೇಶದಲ್ಲಿ ಗುಂಡು ಹಾರಿಸಿಕೊಂಡಿದ್ದಾನೆ ಎಂದು ವಿವರಿಸಲಾಗಿದೆ. ಗುಂಡಿನ ದಾಳಿ ನಡೆದಿರುವ ಬಗ್ಗೆ ಮಾಹಿತಿ ಬಂದ ಕೂಡಲೇ ಅಲ್ಲಿಗೆ ತೆರಳಿ ತನಿಖೆ ಆರಂಭಿಸಿದೆವು ಎಂದು ಪೊಲೀಸರು ತಿಳಿಸಿದ್ದಾರೆ. ವ್ಯಕ್ತಿ ಏಕೆ ಗುಂಡಿನ ದಾಳಿ ನಡೆಸಿದ್ದಾನೆ ಎಂಬ ವಿವರ ಇನ್ನೂ ತಿಳಿದುಬಂದಿಲ್ಲ. ಏತನ್ಮಧ್ಯೆ, ಈ ವರ್ಷ ಅಮೆರಿಕದಲ್ಲಿ 302 ಗುಂಡಿನ ಘಟನೆಗಳು ನಡೆದಿವೆ.
Two Killed 4 Others Including 3 Cops Injured In Texas Shooting
Follow Us on : Google News | Facebook | Twitter | YouTube